ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಶುಕ್ರವಾರ ಭೇಟಿ ನೀಡಲಿದ್ದು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಗುರಿಯಾಗಿಸಿ ಮಂಗಳವಾರ ನಡೆದ ಭಯೋತ್ಪಾದಕ ಕೃತ್ಯದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಅನಂತನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಅವರು ಭೇಟಿ ಮಾಡಲಿದ್ದಾರೆ. ಏ. 22ರಂದು ನಡೆದ ಘಟನೆಯಲ್ಲಿ 26 ಪ್ರವಾಸಿಗರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಅಮೆರಿಕ ಪ್ರವಾಸದಲ್ಲಿದ್ದ ರಾಹುಲ್, ಅದನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಕೇಂದ್ರ ಸರ್ಕಾರ ಆಯೋಜಿಸಿದ್ದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದರು.




