HEALTH TIPS

Pahalgam Terror Attack: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು (ಬುಧವಾರ) ಬಿಡುಗಡೆಗೊಳಿಸಿದೆ. 

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.

ಈ ಕೃತ್ಯದಲ್ಲಿ ಭಾಗಿಯಾಗಿರುವ ಪಾಕಿಸ್ತಾನ ಮೂಲದ ಮೂವರನ್ನು ಆಸೀಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬದುಕುಳಿದವರ ಸಹಾಯದಿಂದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಈ ಮೂವರು ಮೂಸಾ, ಯೂನಸ್ ಹಾಗೂ ಆಸೀಫ್ ಎಂಬ ಹೆಸರುಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ.

ಪೂಂಚ್‌ನಲ್ಲಿ ಭಯೋತ್ಪಾದಕ ಸಂಬಂಧ ಕೃತ್ಯಗಳಲ್ಲಿ ಶಂಕಿತ ಉಗ್ರರು ಭಾಗಿಯಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್‌-ಎ-ತಯಬಾ ಬೆಂಬಲಿತ ಉಗ್ರ ಸಂಘಟನೆಯಾದ ರೆಸಿಸ್ಟನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries