ಜೆರುಸಲೇಮ್: 'ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯಿಂದ ಅತೀವ ದುಃಖವಾಗಿದೆ' ಎಂದು ಹೇಳಿರುವ ಇಸ್ರೇಲ್, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ತಾನು ಭಾರತದೊಂದಿಗೆ ನಿಲ್ಲುವುದಾಗಿ ಹೇಳಿದೆ.
ಈ ಕುರಿತು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯನ್ ಝಾರ್, ದಾಳಿಯಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

