HEALTH TIPS

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಭದ್ರತಾ ಪಡೆಗಳ ಜಂಟಿ ತಂಡವು ತೆಲಂಗಾಣ-ಛತ್ತೀಸಗಢ ಅಂತರರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟಾ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇದುವರೆಗೆ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries