ತಿರುವನಂತಪುರಂ: ನೈಋತ್ಯ ಮಾನ್ಸೂನ್ ಕೇರಳಕ್ಕೆ ಆಗಮಿಸಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮುಂಗಾರು ಇಷ್ಟು ಬೇಗ ಆಗಮಿಸಿದೆ.
ಈ ಹಿಂದೆ 2009ರ ಮೇ 23 ರಂದು ಮಾನ್ಸೂನ್ ಆಗಮಿಸಿತ್ತು. ಬಲವಾದ ಗಾಳಿ ಸಾಧ್ಯತೆಯಿದೆ. ವಾಯುಭಾರ ಕುಸಿತ ಮಾನ್ಸೂನ್ ಗಾಳಿಯ ವೇಗವನ್ನು ಹೆಚ್ಚಿಸಿದೆ.
ಗಂಟೆಗೆ 59 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಆರು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಇದೇ 27 ರವರೆಗೆ ಮೀನುಗಾರಿಕೆ ನಿಷೇಧಿಸಲಾಗಿದೆ. ಈ ಮಧ್ಯೆ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
ಕಣ್ಣೂರು ಜಿಲ್ಲೆ ಹಾಗೂ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯ ಸಲಹೆಯನ್ನು ನೀಡಲಾಗಿದೆ. ವಲಪಟ್ಟಣಂ ನಿಂದ ನ್ಯೂ ಮಾಹೆವರೆಗೆ ಸಮುದ್ರ ಕೊರೆತ ಮತ್ತು ಎತ್ತರದ ಅಲೆಗಳು ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆಯಲ್ಲಿ ತಿಳಿಸಲಾಗಿದೆ. ಈ ಎಚ್ಚರಿಕೆ ಇಂದು ರಾತ್ರಿ 8:30 ರಿಂದ 24 ಗಂಟೆಗಳ ಕಾಲ ಜಾರಿಯಲ್ಲಿರುತ್ತದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಕಣ್ಣೂರಿನ ಪ್ರವಾಸಿ ಆಕರ್ಷಣೆಗಳನ್ನು ಮುಂದಿನ ಮೂರು ದಿನಗಳವರೆಗೆ ಮುಚ್ಚಲಾಗಿದೆ ಎಂದು ಡಿಟಿಪಿಸಿ ಪ್ರಕಟಿಸಿದೆ.
ಏತನ್ಮಧ್ಯೆ, ಬಲವಾದ ಗಾಳಿ ಮತ್ತು ಮಳೆಯು ರಾಜ್ಯದಲ್ಲಿ ವ್ಯಾಪಕ ಹಾನಿಯನ್ನುಂಟುಮಾಡಿತು. ತಿರುವನಂತಪುರಂ ಜಿಲ್ಲೆಯಲ್ಲಿ ಮಳೆಯಿಂದ ಹಾನಿ ಹೆಚ್ಚು.




.webp)
.webp)
