ಪೆರ್ಲ: ಪೆರ್ಲದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಅಭಿಮಾನಿ ಬಳಗದ ಆಶ್ರಯದಲ್ಲಿ ಹಾಗೂ ಪೆರ್ಲದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಹಭಾಗಿತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಮೇ 18ರಂದು ಮಧ್ಯಾಹ್ನ 2.30 ರಿಂದ 5.30 ರವರೆಗೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಆರೋಗ್ಯ ತಪಾಸಣೆ ಮತ್ತು ಔಷಧ ಸಂಪೂರ್ಣವಾಗಿ ಉಚಿತವಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ದೀರ್ಘ ಕಾಲದ ನೋವು, ಚರ್ಮದ ಕಾಯಿಲೆ, ಉಸಿರಾಟ ಸಂಬಂಧಿತ ಕಾಯಿಲೆ, ರಕ್ತಹೀನತೆ, ಮಧುಮೇಹ ಇತ್ಯಾದಿ ಕಾಯಿಲೆಗಳಿಗೆ ಸೂಕ್ತವಾದ ತಪಾಸಣೆ ಮಾಡಿ ಉಚಿತ ಔಷಧ ವಿತರಿಸಲಾಗುವುದು ಎಂದು ಪ್ರಕಟಣೆ ತಿಲಿಸಿದೆ.




