ನವದೆಹಲಿ: ಪಾಕಿಸ್ತಾನದ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಅವರನ್ನು ಮಂಗಳವಾರ ಹೊರಹಾಕಿದೆ.
ವಿದೇಶಾಂಗ ಸಚಿವಾಲಯವು ಅಧಿಕಾರಿಗೆ ಭಾರತವನ್ನು ತೊರೆಯಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ನಾಲ್ಕು ದಿನಗಳ ಮಿಲಿಟರಿ ಮುಖಾಮುಖಿಯ ನಂತರ ಉಭಯ ದೇಶಗಳ ನಡುವೆ ಹೆಚ್ಚಿದ ಉದ್ವಿಗ್ನತೆಯ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ.
ಅಧಿಕಾರಿಯ ಚಟುವಟಿಕೆಗಳ ಕುರಿತು ನವದೆಹಲಿಯಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಗೆ ಭಾರತ ನೋಟಿಸ್ ನೀಡಿದೆ.




