ತಿರುವನಂತಪುರಂ: ಕೇರಳದಲ್ಲಿ ಶಾಲಾ ತರಗತಿ ಜೂ. 2ರಂದು ಪುನಾರಂಭಗೊಳ್ಳಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಬಿರುಸಿನ ಮಳೆಯ ಸ್ವಾಗತ ಲಭಿಸಲಿದೆ. 2ರಂದು ಬೆಳಗ್ಗೆ 9.30ಕ್ಕೆ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವ ತಿರುವನತಪುರದ ಕವಲೂರ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರವೇಶೋತ್ಸವ ಉದ್ಘಾಟಿಸುವು.
ಈಗಾಗಲೇ ಬಿರುಸಿನ ಮಳೆಯಾಗುತ್ತಿದ್ದು, ಕಾಸರಗೋಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಜಾರಿಯಲ್ಲಿದೆ. ಮುಂಗಾರು ಆರಂಭಕ್ಕೂ ಮೊದಲು ರಾಜ್ಯದಲ್ಲಿ ಬಿರುಸಿನ ಮಳೆ ಆರಂಭಗೊಂಡಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇಂದು(ಮೇ 27) ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ.


