ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 38 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹84.58 ಆಗಿದೆ.
ಭಾರತ ಮತ್ತು ಅಮೆರಿಕದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಕುರಿತ ಮಾತುಕತೆಯು ಉತ್ತಮವಾಗಿ ನಡೆಯುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಿದೆ. ಹೀಗಾಗಿ, ರೂಪಾಯಿ ಮೌಲ್ಯ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಸೂಚ್ಯಂಕ ಇಳಿಕೆ: ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟಿನಿಂದ ಷೇರು ಸೂಚ್ಯಂಕಗಳು ಇಳಿಕೆಯಾಗಿವೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 46 ಅಂಶ ಇಳಿಕೆಯಾಗಿದ್ದು, 80,242 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 1 ಅಂಶ ಕಡಿಮೆಯಾಗಿ, 24,334 ಆಗಿದೆ.




