ದೀರ್ ಅಲ್-ಬಲಾಹ್ (AP): ಗಾಜಾಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಮಹಿಳೆ ಮತ್ತು ಮಕ್ಕಳು ಸೇರಿ ಕನಿಷ್ಠ 59 ಜನರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ನೂರಾರು ನಿರಾಶ್ರಿತ ಪ್ಯಾಲೆಸ್ಟೀನಿಯನ್ನರು ಆಶ್ರಯ ಪಡೆಯುತ್ತಿರುವ ಶಾಲೆಯೊಂದನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಮಂಗಳವಾರ ರಾತ್ರಿ ನಡೆಸಿದ ದಾಳಿಯೊಂದರಲ್ಲಿ ಒಂಭತ್ತು ಮಹಿಳೆಯರು ಮತ್ತು ಮೂರು ಮಕ್ಕಳು ಸೇರಿದಂತೆ ಒಟ್ಟು 27 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್-ಅಕ್ಸಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಮುಂಜಾನೆ ಗಾಜಾ ಪಟ್ಟಣದ ನಿರಾಶ್ರಿತರ ಶಾಲೆಯೊಂದನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮತ್ತೊಂದು ದಾಳಿಯಲ್ಲಿ 16 ಜನರು ಮೃತಪಟ್ಟಿದ್ದಾರೆ. ಇತರ ಪ್ರದೇಶದಲ್ಲಿ ನಡೆಸಿದ ಇನ್ನೊಂದು ದಾಳಿಯಲ್ಲಿ 16 ಜನ ಸಾವಿಗೀಡಾಗಿದ್ದಾರೆ ಎಂದು ಅಲ್- ಅಹ್ಲಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.




