ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗ್ನಾನಿಯಲ್ಲಿ ಇಂದು (ಗುರುವಾರ) ಬೆಳಿಗ್ಗೆ ಏಳು ಜನರಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
'ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್ ಸೇರಿದಂತೆ ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಮತ್ತು ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದೇನೆ' ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.





