HEALTH TIPS

ಕಯ್ಯಾರರ ಜನ್ಮದಿನ ಸಂಭ್ರಮ ಜೂ.8 ರಂದು

ಕಾಸರಗೋಡು: ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ  ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಜೂ.8 ರಂದು ಕಯ್ಯಾರ ಕಿಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ- 2025 ನಡೆಯಲಿದೆ. ಕನ್ನಡ ಭವನ ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕøತಿಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಕಯ್ಯಾರರು ರಚಿಸಿದ ಹಾಡುಗಳ ಗಾಯನ, ಕಯ್ಯಾರರ ಕುರಿತ ಕವನ ವಾಚನ, ಕಯ್ಯಾರರ ಕುರಿತ ಭಾಷಣ, ಕಯ್ಯಾರರ ಕುರಿತ ಚಿತ್ರ ರಚನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮೂಹ ನೃತ್ಯ, ನೃತ್ಯ, ಭಜನೆ, ಕುಣಿತ ಭಜನೆ ನಡೆಯಲಿದೆ. ಅಸಕ್ತರು ಹೆಚ್ಚಿನ ಮಾಹಿತಿಗೆ 9633073400 ಅಥವಾ 9446282641 ಸಂಖ್ಯೆಯನ್ನು ಸಂಪರ್ಕಿಸಬೇಕೆಂದು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ಕೆ ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries