HEALTH TIPS

ಪಾಕಿಸ್ತಾನ, ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ನಸುಕಿನ ಜಾವ 1:05 ರಿಂದ 1:30 ರವರೆಗೆ ಬಾಂಬ್ ದಾಳಿ: ಮಹಿಳಾ ಸೇನಾಧಿಕಾರಿಗಳಿಂದ ವಿವರಣೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.

ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು ಮಹಿಳಾ ಅಧಿಕಾರಿಗಳು ಕಾರ್ಯಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries