ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ತಾಲೂಕಿನ ಯೋಜನಾಧಿಕಾರಿಯಾಗಿ ಕಳೆದ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಮೈಸೂರು ಪ್ರಾದೇಶಿಕ ವ್ಯಾಪ್ತಿಗೆ ವರ್ಗಾವಣೆಗೊಳ್ಳುತ್ತಿರುವ ಮುಕೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ತಿನ ಕಾಸರಗೋಡು ತಾಲೂಕು ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಸರಗೋಡಿನ ಯೋಜನಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪರಿಷತ್ತಿನ ತಾಲೂಕು ಸಮಿತಿ ಅಧ್ಯಕ್ಷ ಡಾ. ಕೆ.ಎನ್.ವೆಂಕಟರಮಣ ಹೊಳ್ಳ ಅವರು ಮುಕೇಶ್ ಅವರು ಕಳೆದ ನಾಲ್ಕು ವರ್ಷಗಳ ಕಾಳ ಯೋಜನಾಧಿಕಾರಿಯಾಗಿ ನಡೆಸಿದ ಸೇವೆಯನ್ನು ಸ್ಮರಿಸಿದರು. ನಂತರ ಶಾಲುಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿದರು. ಭಜನಾ ಪರಿಷತ್ತಿನ ಗೌರವಾಧ್ಯಕ್ಷ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ಕಾಸರಗೋಡು ತಾಲೂಕಿಗೆ ವರ್ಗಾವಣೆಗೊಂಡು ಬಂದಿರುವ ನೂತನ ಯೋಜನಾಧಿಕಾರಿ ದಿನೇಶ್ ಬಿ, ಕಾಸರಗೋಡು ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಕಚೇರಿ ಸಿಬ್ಬಂದಿ, ಕಾಸರಗೋಡು ವಿಭಾಗದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.





