HEALTH TIPS

ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಬೂಕರ್ ಪ್ರಶಸ್ತಿ

ಲಂಡನ್: ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ, ಸಣ್ಣ ಕತೆಗಳ ಅನುವಾದಿತ ಸಂಕಲನ 'ಹಾರ್ಟ್ ಲ್ಯಾಂಪ್'ಗೆ ಈ ಪ್ರಶಸ್ತಿ ಲಭಿಸಿದೆ.

ಇದರೊಂದಿಗೆ, ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಂತಾಗಿದೆ.

ಪ್ರಶಸ್ತಿಯು ಅಂದಾಜು ₹ 57.28 ಲಕ್ಷ (50 ಸಾವಿರ ಪೌಂಡ್‌) ನಗದು ಒಳಗೊಂಡಿದೆ.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ.

ಟೇಟ್ ಮಾಡರ್ನ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ.

'ಯಾವ ಕಥೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದಲೇ ಈ ಪುಸ್ತಕ ರೂಪುಗೊಂಡಿತು' ಎಂದು ಹೇಳಿದ್ದಾರೆ.

'ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು' ಎಂದು ಅನುವಾದಕಿ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.

ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್‌, ಇಟಾಲಿಯನ್‌ ಹಾಗೂ ಡ್ಯಾನಿಷ್‌ ಭಾಷೆಯ ತಲಾ ಒಂದು ಕೃತಿ 'ಶಾರ್ಟ್‌ ಲಿಸ್ಟ್‌'ನಲ್ಲಿದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries