ಕಾಸರಗೋಡು: ಕಾಞಂಗಾಡು ಮಿನಿ ಸಿವಿಲ್ ಸ್ಟೇಷನ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸದುರ್ಗ ನಗರದ ಉದ್ಯೋಗ ಕೇಂದ್ರ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಾವಕಾಶ ಕೇಂದ್ರದ ನೇತೃತ್ವದಲ್ಲಿ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಮೇ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿನಿಮಯ ಕೇಂದ್ರದಲ್ಲಿ ನೋಂದಣಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ಸಂದರ್ಭ ಖಾಸಗಿ ಸಂಸ್ಥೆಗಳಿಗೂ ಸಂದರ್ಶನ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅದೇ ದಿನ ಬೆಳಗ್ಗೆ 10 ಗಂಟೆಗೆ ಪ್ರಮಾಣಪತ್ರಗಳ ಪ್ರತಿಗಳು ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. 250 ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಜೀವನಪರ್ಯಂತವಾಗಿದ್ದು, ವಯೋಮಿತಿ 18ರಿಂದ 35 ವರ್ಷವಾಗಿದೆ. ವಿದ್ಯಾರ್ಹತೆ ಎಸ್ಸೆಸೆಲ್ಸಿಯಾಗಿದ್ದು, ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(9207155700)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




