ಜಮ್ಮು/ಜೈಪುರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿನ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆ ಶನಿವಾರ ಹೊಡೆದುರುಳಿಸಿದ ಪಾಕಿಸ್ತಾನ ಡ್ರೋನ್‌ನ ಅವಶೇಷ ಅಪ್ಪಳಿಸಿದ ಪರಿಣಾಮ ಯೋಧರೊಬ್ಬರು ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಡ್ರೋನ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ.
ಆದರೆ ಅದರ ಅವಶೇಷವೊಂದು ವಾಯುನೆಲೆಯಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರ ಮೆಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





