ಇಂಫಾಲ್: ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯ ವೇಳೆ ಮೃತಪಟ್ಟಿದ್ದವರ ಗೌರವಾರ್ಥ ಈಚೆಗೆ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ನೀಡಲಾದ 'ಗೌರವ ವಂದನೆ' ಸಂಬಂಧ ಎಫ್‌ಐಆರ್ ದಾಖಲಾಗಿದೆ.
ಜನಾಂಗೀಯ ಘರ್ಷಣೆ ಆರಂಭವಾಗಿ ಎರಡು ವರ್ಷವಾದ ನಿಮಿತ್ತ ಸೈಕುಲ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸಲ್ಲಿಸಲಾಗಿತ್ತು.
ಅಧಿಕಾರಿಗಳು ಇಲ್ಲಿ ಐದು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಕಿ ಸಮುದಾಯದ ಪ್ರಾಬಲ್ಯವುಳ್ಳ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಗೌರವ ವಂದನೆ ಕಾರ್ಯಕ್ರಮದಲ್ಲಿ ಸೇನಾ ಸಿಬ್ಬಂದಿಯೂ ಭಾಗವಹಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ಮುಖಂಡರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.




