ಕಾಸರಗೋಡು: ನೆಹರು ಯುವ ಕೇಂದ್ರದ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ, ಡಿವೈಎಫ್‍ಐ ಜಿಲ್ಲಾ ಸಮಿತಿಯು ನೆಹರು ಯುವ ಕೇಂದ್ರದ ಜಿಲ್ಲಾ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿತು.
ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ರಾಜೀಶ್ ವೆಳ್ಳಾಟ್ ಪ್ರತಿಭಟನಾ ಧರಣಿ ಉದ್ಘಾಟಿಸಿದರು. ಸಂಘಟನೆ ಜಿಲ್ಲಾ ಜತೆ ಕಾರ್ಯದರ್ಶಿ ಪಿ.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಎ.ವಿ. ಶಿವಪ್ರಸಾದ್, ಸಾದಿಕ್ ಚೆರುಗೋಳಿ ಮತ್ತು ಕೆ.ವಿ. ನವೀನ್ ಮೊದಲಾದವರು ನೇತೃತ್ವ ವಹಿಸಿದ್ದರು. ಡಿವೈಎಫ್‍ಐ ಕಾಸರಗೋಡು ಬ್ಲಾಕ್ ಕಾರ್ಯದರ್ಶಿ ಸುಭಾಷ್ ಪಾಡಿ ಸ್ವಾಗತಿಸಿದರು.





