ಕಾಸರಗೋಡು: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ 'ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ'ಕಾರ್ಯಕ್ರಮದನ್ವಯ ನಿವೃತ್ತ ಬ್ಯಾಂಕ್ ಪ್ರಬಂಧಕ, ಲೇಖಕ, ಅನುವಾದಕ ಬಿ. ನರಸಿಂಗರಾವ್ ಕಾಸರಗೋಡು ಅವರನ್ನು ಕಾಸರಗೋಡು ನಗರದಲ್ಲಿರುವ ಅವರ ನಿವಾಸ 'ಸುಧಾಮ'ದಲ್ಲಿ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಕೆ.ಸತ್ಯನಾರಾಯಣ ತಂತ್ರಿ ಅಭಿನಂದನಾ ಭಾಷಣ ಮಾಡಿದರು. ಡಾ. ಜಯಪ್ರಕಾಶ್‍ನಾರಾಯಣ ತೊಟ್ಟೆತ್ತೋಡಿ ಅವರು ನರಸಿಂಗ ರಾವ್ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ. ಎನ್ ಮೂಡಿತ್ತಾಯ, ಕನ್ನಡ ನೌಕರರ ಸಂಘದ ಮಾಜಿ ಅಧ್ಯಕ್ಷ ಜಯನಾರಾಯಣ ತಾಯನ್ನೂರು, ಹಿರಿಯ ಸಾಹಿತಿ ವೈ . ಸತ್ಯನಾರಾಯಣ ಕಾಸರಗೋಡು ಬಿ.ನರಸಿಂಗರಾವ್ ಅವರ ಸಾಹಿತ್ಯ ಹಾಗೂ ವ್ಯಕ್ತಿತ್ವದ ಕುರಿತು ಮಾತನಾಡಿದರು. ರಮೇಶ ಏತಡ್ಕ ಮತ್ತು ಪ್ರೇಮ ಶರಧಿ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ವಂದಿಸಿದರು.






