ಕುಂಬಳೆ: ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ಸಹಿತ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಭಾನುವಾರ ಸಂಪನ್ನಗೊಂಡಿತು. ಬೆಳಗ್ಗೆ 4.30ಕ್ಕೆ 108 ತೆಂಗಿನಕಾಯಿ ಗಣಪತಿ ಹೋಮ, ಪ್ರತಿಷ್ಠಾ ಪಾಣಿ ಬಳಿಕ 7.18ರ ವೃಷಭ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಮಹಾಲಿಂಗೇಶ್ವರ ಸಹಿತ ಸಪರಿವಾರ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಿತು. ಬಳಿಕ ಪ್ರತಿಷ್ಠಾ ಬಲಿ, ಮಹಾಪೂಜೆ, ಮಹಾಮಂತ್ರಾಕ್ಷತೆ, ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು.
ಸುದೀರ್ಘ 19 ವರ್ಷಗಳ ಬಳಿಕ ಊರ ಹಾಗೂ ಪರವೂರ ಭಕ್ತಜನರ ಸಹಕಾರದೊಂದಿಗೆ ಅತೀ ಕಡಿಮೆ ಅವಧಿಯಲ್ಲಿ ಶ್ರೀಕ್ಷೇತ್ರ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶ ನಡೆಯಿತು.




.jpg)
.jpg)
.jpg)
