ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೆಂಪಯ್ಯ ಸೋಮಶೇಖರ್ ಅವರನ್ನು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಕೇಂದ್ರ ಕಾನೂನು ಸಚಿವಾಲಯ ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದಲ್ಲಿ ಮೇ 15ರಂದು ನಡೆದ ಕೊಲಿಜಿಯಂ, ನ್ಯಾಯಮೂರ್ತಿ ಸೋಮಶೇಖರ್ ಅವರಿಗೆ ಬಡ್ತಿ ನೀಡಲು ಶಿಫಾರಸು ಮಾಡಿತ್ತು.
ಮಣಿಪುರ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ಕೃಷ್ಣಕುಮಾರ್ ಅವರು ಮೇ 21ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

