ಪೆರ್ಲ: ಎಣ್ಮಕಜೆಯ ಚೌಗ್ರಾಮ ದೇವಾಲಯವೆಂದೇ ಖ್ಯಾತಿಪಡೆದಿರುವ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಗ್ಗೆ ಪೆರ್ಲ ಶ್ರೀ ಸತ್ಯನಾರಾಯಣ ದೇವಸ್ಥಾನ ವಠಾರದಿಂದ ಭವ್ಯ ಶೋಭಾಯಾಥ್ರೆ ಮೂಲಕ ಹಸಿರುವಾಣಿ ಸಮರ್ಪಣಾ ಮೆರವನಿಗೆ ನಡೆಯಿತು. ಮಾಣಿಲಶ್ರೀಧಾಮದ ಶ್ರೀಮೋಹನದಾಸ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದ್ದು, ಅಡ್ಕಸ್ಥಳ ಮಾರ್ಗವಾಗಿ ಹಸಿರುವಾಣಿ ಹೊರೆಕಾಣಿಕೆ ಭವ್ಯ ಶೋಭಾಯಾತ್ರೆ ಶ್ರೀ ಕ್ಷೇತ್ರಕ್ಕೆ. ತಲುಪಿತು. ನಂತರ ಉಗ್ರಾಣ ಮುಹೂರ್ತ,ಮಹಾಪೂಜೆ, ಪ್ರಸಾದವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಕೀಕಾಂಗೋಡು ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರಿಗೆ ಪೂರ್ಣಕುಂಭ ಸ್ವಾಗತ, ನಂತರ ವಿವಿಧ ವೈದಿಕ, ಸಂಸ್ಕøತಿಕ ಕಾರ್ಯಕ್ರಮ ಜರುಗಿತು.
ಪರಮಪೂಜ್ಯ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಪರಮಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸವಾಮೀಜಿ ಅವರಿಗೆ ಪೂರ್ಣಕುಂಭ ಸ್ವಾಗತ, ಯತಿದ್ವಯರ ದಿವ್ಯ ಉಪಸ್ಥಿತಿಯಲ್ಲಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಎಣ್ಮಕಜೆ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಿತು.


