ಮುಳ್ಳೇರಿಯ: ಇಲ್ಲಿಯ ಗಣೇಶ ಕಲಾ ಮಂದಿರದ ಪಾಕ ಶಾಲೆ ಮತ್ತು ಭೋಜನ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಎರಡು ಲಕ್ಷ ರೂ. ಸಹಾಯಧನದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಸರಗೋಡು ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ ಸಮಿತಿ ಅಧ್ಯಕ್ಷ ರಂಗನಾಥ್ ರಾವ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ದಿನೇಶ್, ಜನ ಜಾಗೃತಿ ವೇದಿಕೆ ವಲಯಾಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಸಮಿತಿ ಕಾರ್ಯದರ್ಶಿ ಸಂತೋಷ್ ಕುಮಾರ್, ಸಮಿತಿ ಸದಸ್ಯ ಸತ್ಯನಾರಾಯಣ, ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಬೆಳ್ಳಿಗೆ, ಮೇಲ್ವಿಚಾರಕ ಸುರೇಶ್, ಸೇವಾ ಪ್ರತಿನಿಧಿ ರಾಜೇಶ್ವರಿ ಉಪಸ್ಥಿತರಿದ್ದರು.




.jpg)
