ಕಾಸರಗೋಡು: ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ)ಯಲ್ಲಿ ಒಳಪಡಿಸಲಿರುವ ಯೋಜನೆಯ ಅವಧಿಯನ್ನು 2028-29ರ ಆರ್ಥಿಕ ವರ್ಷದವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಸದಸ್ಯರಾಗುವ ತಲೆಹೊರೆ ಕಾರ್ಮಿಕರಿಗೆ ವಸತಿ ಮತ್ತು ಇತರ ಯೋಜನೆಗಳಲ್ಲಿ 60:40 ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರ್ಥಿಕ ನೆರವು ನೀಡಲಿದೆ. ಈ ಹಿನ್ನೆಲೆಯಲ್ಲಿ ಕೇರಳ ಪೆÇೀರ್ಟರ್‍ಗಳ ಕಲ್ಯಾಣ ಮಂಡಳಿಯ ಅಡಿಯಲ್ಲಿ ನೋಂದಾಯಿಸಲಾದ ಅಸಂಘಟಿತ ವಲಯದ ಪೆÇೀರ್ಟರ್‍ಗಳು ಸನಿಹದ ಅಕ್ಷಯ ಮತ್ತು ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ಯೋಜನೆಯ ಸದಸ್ಯರಾಗಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸನಿಹದ ಅಕ್ಷಯ ಮತ್ತು ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




