ಬೀಜಿಂಗ್/ ಇಸ್ಲಾಮಾಬಾದ್ (PTI): ಚೀನಾ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ವಿದೇಶಾಂಗ ಸಚಿವರು ಬೀಜಿಂಗ್‌ನಲ್ಲಿ ಭೇಟಿಯಾಗಿ ಮೂರು ದೇಶಗಳ ಸಂಬಂಧ ವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರನ್ನು (ಸಿಪಿಇಸಿ) ಅಫ್ಗಾನಿಸ್ತಾನದವರೆಗೆ ವಿಸ್ತರಿಸಲು ನಿರ್ಧರಿಸಿದರು.
ಚೀನಾ ವಿದೇಶಾಂಗ ಸಚಿವ ವಾಂಗ್ ಯಿ, ಪಾಕಿಸ್ತಾನದ ಇಶಾಕ್ ಡಾರ್ ಮತ್ತು ಅಫ್ಗಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರು ಭೇಟಿಯಾಗಿ ಮಾತುಕತೆ ನಡೆಸಿದರು ಎಂದು ಪಾಕಿಸ್ತಾನ ಹೇಳಿಕೆಯಲ್ಲಿ ತಿಳಿಸಿದೆ.
ಸಾರ್ವಭೌಮತೆ, ಭದ್ರತೆ ಮತ್ತು ರಾಷ್ಟ್ರೀಯ ಘನತೆ ಕಾಪಾಡಲು ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ವಾಂಗ್ ಯಿ ತಿಳಿಸಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಾದುಹೋಗುವ ಕಾರಣ ಭಾರತ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಇಶಾಕ್ ಡಾರ್ ಪಾಕಿಸ್ತಾನದ ವಿದೇಶಾಂಗ ಸಚಿವಪ್ರಾದೇಶಿಕ ಶಾಂತಿ ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಪಾಕಿಸ್ತಾನ ಚೀನಾ ಮತ್ತು ಅಫ್ಗಾನಿಸ್ತಾನ ಒಟ್ಟಿಗೆ ಕೆಲಸ ಮಾಡಲಿವೆ.

