ಕಾಸರಗೋಡು: ಭಾರತದ ರಕ್ಷಣೆಗೆ ಹಾಗೂ ದುಷ್ಟ ಶಕ್ತಿಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಹೋರಾಡುತ್ತಿರುವ ವೀರ ಯೋಧರಿಗೆ ಶಕ್ತಿ, ಆತ್ಮ ಧೈರ್ಯ ತುಂಬಲು ಹಾಗೂ ಕಾಶ್ಮೀರ ಭಯೋತ್ಪಾದನಾ ಕೃತ್ಯದಲ್ಲಿ ಮಡಿದವರ ಆತ್ಮ ಶಾಂತಿಗಾಗಿ ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಸಲಾಯಿತು. ವಿಶ್ವಹಿಂದೂ ಪರಿಷತ್ ಕಾಸರಗೋಡು ನಗರ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಸರಗೋಡು ನಗರಸಭಾ ಸದಸ್ಯೆ ಶ್ರೀಲತಾ ಟೀಚರ್, ವಿ.ಎಚ್.ಪಿ. ನಗರ ಘಟಕ ಗೌರವಾಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಕೆ.ಎನ್. ರಾಮಕೃಷ್ಣ ಹೊಳ್ಳ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀರಂತಬೈಲ್, ಕಾರ್ಯದರ್ಶಿ ಕಿಶೋರ್ ಕುಮಾರ್, ವಸಂತ್ ಕೆರೆಮನೆ ಮೊದಲಾದವರು ಪಾಲ್ಗೊಂಡಿದ್ದರು.
(ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಾರ್ಥನೆ ನಡೆಸಲಾಯಿತು.)





