HEALTH TIPS

ಬಾಂಗ್ಲಾ: ಆರೋಪಿಗಳ ಪರ ಪ್ರಚಾರ ನಿಷೇಧ

ಢಾಕಾ/ನವದೆಹಲಿ: ಆರೋಪ ಎದುರಿಸುತ್ತಿರುವ ಸಂಘಟನೆ ಮತ್ತು ವ್ಯಕ್ತಿಯ ಹೇಳಿಕೆ, ಅವರಿಗೆ ಸಂಬಂಧಿಸಿದ ಯಾವುದೇ ವಿಷಯದ ಕುರಿತು ಪ್ರಸಾರ ಮಾಡುವುದನ್ನು ಪರಿಷ್ಕೃತ ಭಯೋತ್ಪಾದನಾ ನಿಗ್ರಹ ಕಾಯ್ದೆ ಅಡಿಯಲ್ಲಿ ಬಾಂಗ್ಲಾದೇಶವು ನಿಷೇಧಿಸಿದೆ.

ಅಂತಹ ಸಂಘಟನೆ ಹಾಗೂ ವ್ಯಕ್ತಿಗೆ ಬೆಂಬಲ ನೀಡುವ ಪತ್ರಿಕಾ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳನ್ನು ಹಂಚಿಕೊಳ್ಳುವುದು ಹಾಗೂ ಸಾರ್ವಜನಿಕ ಸಭೆಗಳನ್ನು ಈ ಕಾಯ್ದೆಯು ನಿಷೇಧಿಸುತ್ತದೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರಪತಿ ಮೊಹಮ್ಮದ್‌ ಶಹಾಬುದ್ದೀನ್‌ ಅವರು ಭಯೋತ್ಪಾದನಾ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಭಾನುವಾರ ರಾತ್ರಿ ಹೊರಡಿಸಿದರು.

ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್‌ ನೇತೃತ್ವದ ಸಚಿವ ಸಂಪುಟವು 2009ರ ಭಯೋತ್ಪಾದನಾ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಅನುಮೋದಿಸಿದ ಬಳಿಕ ರಾಷ್ಟ್ರಪತಿಗಳು ಸಹಿ ಹಾಕಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries