ಕಾಸರಗೋಡು: ಜಿಲ್ಲೆಯ ವಿವಿಧೆಡೆ ಭಾನುವಾರ ಮಧ್ಯಾಹ್ನದಿಂದ ಸಾಮಾನ್ಯ ಮಳೆಯಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ಬೇಸಿಗೆ ಮಳೆ ತಂಪೆರಚಿದೆ. ಕೇರಳದ ದಕ್ಷಿಣದ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳುವ ಸಾಧ್ಯತೆ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್, ಮಲಪ್ಪುರಂ ಹಾಗೂ ವಯನಾಡ್ ಜಿಲ್ಲೆಗಳಲ್ಲಿ ಮಂಗಳವಾರದ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳಕ್ಕೆ ಈ ಬಾರಿ ಮೇ 27ಕ್ಕೇ ಮುಂಗರು ಪ್ರವೇಶಿಸಲಿರುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.





