ದಿ ಹೇಗ್: ಭಾರತ ಮತ್ತು ನೆದರ್ಲೆಂಡ್ ನಡುವಿನ ಸಂಬಂಧ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲು ವಿದೇಶಾಂಗ ಸಚಿವ ಜೈಶಂಕರ್ ಸೋಮವಾರ ನೆದರ್ಲೆಂಡ್‌ಗೆ ಭೇಟಿ ನೀಡಿದ್ದಾರೆ. 3 ದೇಶಗಳ ಪ್ರವಾಸ ಕೈಗೊಂಡಿರುವ ಸಚಿವರ ಮೊದಲ ಭೇಟಿ ಇದಾಗಿದೆ. ಬಳಿಕ ಡೆನ್ಮಾರ್ಕ್, ಜರ್ಮನಿಗೂ ತೆರಳಲಿದ್ದಾರೆ.
ಜೈಶಂಕರ್ ಭೇಟಿ ಕುರಿತಂತೆ ದಿ ಹೇಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.' ನದರ್ಲೆಂಡ್ಸ್‌ನ ವಿದೇಶಾಂಗ ಸಚಿವಾಲಯದ ಅಧಿಕಾರಿ ಹಾಗೂ ರಾಯಭಾರಿಗಳು ಜೈಶಂಕರ್ ಅವರನ್ನು ಸ್ವಾಗತಿಸಿದ್ದಾರೆ. ಅವರ ಈ ಭೇಟಿಯು ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿಸಲಿದೆ' ಎಂದಿದೆ.
ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಕುರಿತು 3 ರಾಷ್ಟ್ರಗಳ ವಿದೇಶಾಂಗ ಸಚಿವರ ಜತೆಗೆ ಜೈಶಂಕರ್ ಚರ್ಚೆ ನಡೆಸುವ ನಿರೀಕ್ಷೆ ಇದೆ. ಜತೆಗೆ ಇತ್ತೀಚೆಗೆ ನಡೆದ ಭಾರತ-ಪಾಕಿಸ್ತಾನ ಸಂಘರ್ಷದ ವಿಚಾರವೂ ಚರ್ಚೆಯಾಗಬಹುದು ಎನ್ನಲಾಗಿದೆ.

