HEALTH TIPS

ಕೋಲ್ಕತ್ತ | ಪಾಕ್ ಪ್ರಜೆಗಳ ಅಕ್ರಮ ವಾಸ; ಗಡೀಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕೋಲ್ಕತ್ತ: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಅಕ್ರಮವಾಗಿ ವಾಸವಾಗಿರುವ ಪಾಕಿಸ್ತಾನಿ ನಾಗರಿಕರನ್ನು ಗಡೀಪಾರು ಮಾಡಲಾಗುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನಿಯರನ್ನು ಗುರುತಿಸಿ, ಗಡೀಪಾರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ದಕ್ಷಿಣ 24 ಪರಗಣ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಬಿಜೆಪಿ ಹಿರಿಯ ನಾಯಕ ದೆಬಶ್ರಿ ಚೌದರಿ ನೇತೃತ್ವದಲ್ಲಿ 200ಕ್ಕೂ ಅಧಿಕ ಬೆಂಬಲಿಗರು ಇಂದು ಪ್ರತಿಭಟನೆ ಮಾಡಿದರು.

ಭಾರತದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನಿ ನಾಗರಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಕೇಂದ್ರ ಗೃಹಸಚಿವ ಅಮಿತ್‌ ಶಾ ಆದೇಶ ನೀಡಿದರೂ, ರಾಜ್ಯ ಸರ್ಕಾರವು ತೀವ್ರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದಕ್ಷಿಣ 24 ಪರಗಣ ಜಿಲ್ಲೆ ಸೇರಿದಂತೆ ಪಶ್ಚಿಮ ಬಂಗಾಳದೆಲ್ಲೆಡೆ ಅಡಗಿರುವ ಕುರಿತು ನಮಗೆ ನಂಬಿಕೆಯಿದೆ. ಅವರನ್ನು ಗಡೀಪಾರು ಮಾಡುವಂತೆ ನಾವು ಆಗ್ರಹಿಸುತ್ತೇವೆ ಎಂದು ಮಾಜಿ ಕೇಂದ್ರ ಸಚಿವರಾಗಿರುವ ಚೌದರಿ ಅವರು ಆಗ್ರಹಿಸಿದರು.

ಪ್ರತಿಭಟನೆ ನಡೆಯುತ್ತಿದ್ದ ಜಿಲ್ಲಾ ನ್ಯಾಯಾಲಯದ ಸಮೀಪದಲ್ಲೇ ಪಶ್ಚಿಮ ಬಂಗಾಳ ಪೊಲೀಸ್‌ ಮುಖ್ಯ ಕಚೇರಿ 'ಭವಾನಿ ಭವನ್'ಸಮೀಪ ವಾಹನ ಸಂಚಾರಕ್ಕೆ ಅಡತಡೆಯಾದ ಕಾರಣ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು.

ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, 25ಜನರು ಗಂಭೀರ ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಕಾಶ್ಮೀರದಲ್ಲಿನ ಭಯೋತ್ಪಾದನೆ ಕೃತ್ಯಗಳಲ್ಲಿ ಪಾಕಿಸ್ತಾನದ ಕೈವಾಡವಿದ್ದು, ಉಗ್ರರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries