ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ. ಇದು ದೇಶದ ಕೋಟ್ಯಾಂತರ ಜನರ ಭಾವನೆಯ ಪ್ರತಿಬಿಂಬವಾಗಿದೆ. ಆಪರೇಷನ್ ಸಿಂಧೂರ್ ನ್ಯಾಯದ ಅವಿಚ್ಛಿನ್ನ ಪ್ರತಿಜ್ಞೆಯಾಗಿದೆ. ಮೇ 6ರ ತಡರಾತ್ರಿ ಮತ್ತು ಮೇ 7ರ ಬೆಳಿಗ್ಗೆ, ಇಡೀ ಜಗತ್ತು ಈ ಪ್ರತಿಜ್ಞೆಯು ಫಲಿತಾಂಶವಾಗಿ ಬದಲಾಗುವುದನ್ನು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತೀಯ ಪಡೆಗಳು ಭಯೋತ್ಪಾದಕರ ಕಟ್ಟಡಗಳ ಮೇಲೆ ದಾಳಿ ಮಾಡಿದ್ದಲ್ಲದೆ, ಅವರ ಧೈರ್ಯವನ್ನೂ ಪುಡಿಪುಡಿ ಮಾಡಿವೆ ಎಂದು ಹೇಳಿದರು.




