ಇಂದೋರ್: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ, ಮಧ್ಯಪ್ರದೇಶದ ಇಂದೋರ್‌ನಲ್ಲಿ ಏ.25ರಂದು ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಧ್ವನಿ ಬದಲಾಯಿಸಿ, ನಕಲಿ ವಿಡಿಯೊ ಮಾಡಿ, ಬಿಡುಗಡೆಗೊಳಿಸಲಾಗಿದೆ' ಎಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್‌ನ ಪಾಲಿಕೆ ಸದಸ್ಯ ಅನ್ವರ್ ಖಾದ್ರಿ ತಿಳಿಸಿದ್ದಾರೆ.
'ಇಲ್ಲಿನ ಬದ್ವಾಲಿ ಚೌಕ್‌ನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಕೇಳಿದೆ ಎಂದು ಕೆಲವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಕೂಡ ಹರಿದಾಡಿದೆ. ಇದರ ಆಧಾರದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ' ಎಂದು ಡಿಸಿಪಿ ವಿನೋದ್ ಕುಮಾರ್ ಮೀನಾ ತಿಳಿಸಿದ್ದಾರೆ.
'ವಿಡಿಯೊದ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ. ತನಿಖೆ ನಂತರವೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.
'ಪ್ರತಿಭಟನೆ ಯಾರು ಆಯೋಜಿಸಿದ್ದರು ಎಂಬುದು ಇದುವರೆಗೂ ಗೊತ್ತಾಗಿಲ್ಲ, ಸೂಕ್ತ ಅನುಮತಿಯನ್ನು ಪಡೆದಿರಲಿಲ್ಲ' ಎಂದು ಮೀನಾ ತಿಳಿಸಿದ್ದಾರೆ.
'ಬದ್ವಾಲಿ ಚೌಕಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಬಿಜೆಪಿಯ ಮೂವರಿಂದ ನಾಲ್ವರು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಏಳರಿಂದ ಎಂಟು ಮಂದಿ ಪೊಲೀಸರು ಹಾಜರಿದ್ದು, ವಿಡಿಯೊ ರೆಕಾರ್ಡ್ ಮಾಡಿದ್ದಾರೆ' ಎಂದು ಕಾಂಗ್ರೆಸ್‌ನ ಪಾಲಿಕೆ ಸದಸ್ಯ ಅನ್ವರ್ ಖಾದ್ರಿ ಹೇಳಿದ್ದಾರೆ.




