ಘಟನೆಯಲ್ಲಿ ಕನಿಷ್ಠ ಆರು ಜನ ಮೃತಪಟ್ಟಿದ್ದಾರೆ.ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಬಿಬಿಸಿ ವೆಬ್‌ಸೈಟ್ ವರದಿ ಮಾಡಿದೆ.
ತಾಂತ್ರಿಕ ಅಥವಾ ಇನ್ಯಾವುದೋ ಕಾರಣದಿಂದ ಲಘು ವಿಮಾನ ಪತನವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಜನವಸತಿ ಪ್ರದೇಶದ ಮೇಲೆ ಅಪ್ಪಳಿಸಿರುವ ಪರಿಣಾಮ ಬಹಳಷ್ಟು ಹಾನಿಯಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಅಪ್ಪಳಿಸಿ ಭಾರಿ ಬೆಂಕಿ ಹೊತ್ತಿಕೊಂಡಿದ್ದ ಘಟನೆ ಮನೆಗಳ ಸಿಸಿಟಿವಿಯಲ್ಲಿ ದಾಖಲಾಗಿದೆ. ಅಲ್ಲದೇ ಮನೆಗಳ ಸುತ್ತಮುತ್ತ ನಿಲ್ಲಿಸಿದ್ದ ಕಾರುಗಳೂ ಬೆಂಕಿ ಹೊತ್ತಿಕೊಂಡು ಸುಟ್ಟಿವೆ. ರಾತ್ರಿ ಹೊತ್ತು ಘಟನೆ ನಡೆದಿರುವುದರಿಂದ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ವಿಮಾನದಲ್ಲಿ ಪೈಲಟ್ ಸೇರಿ ಆರು ಜನ ಪ್ರಯಾಣಿಸುತ್ತಿದ್ದರು. 10 ಜನರನ್ನು ಒಯ್ಯಬಹುದಾದ ವಿಮಾನ ಅದಾಗಿತ್ತು ಎಂದು ತಿಳಿದು ಬಂದಿದೆ.




