ನವದೆಹಲಿ (PTI): ಆರೋಪಿಯನ್ನು ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಹೊಂದಿರುವ ಅಧಿಕಾರವನ್ನು ಎತ್ತಿಹಿಡಿದಿರುವ ತೀರ್ಪನ್ನು ಪ್ರಶ್ನಿಸಿರುವ ಅರ್ಜಿಯ ಮೂಲಕ ತೀರ್ಮಾನ ಆಗಬೇಕಿರುವ ವಿಷಯಗಳ ಯಾವುವು ಎಂಬುದನ್ನು ಅಂತಿಮಗೊಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ವಲ್ ಭೂಯಾನ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ತ್ರಿಸದಸ್ಯರ ಪೀಠವು ಕೇಂದ್ರಕ್ಕೆ ಸೂಚನೆ ನೀಡಿದೆ. ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದೆ.




