ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಬಣ್ಣಗಾರಿಕೆ ಬಗ್ಗೆ ಶಿಬಿರ ಆರಂಭಗೊಂಡಿತು. ತೆಂಕುತಿಟ್ಟು ಯಕ್ಷಗಾನದ ಹಿರಿಯ ಯಕ್ಷಗಾನ ಕಲಾವಿದ ಮಾಧವ ಪಾಟಾಳಿ ನೀರ್ಚಾಲು ಶಿಬಿರ ನಡೆಸಿಕೊಡಲಿದ್ದಾರೆ.
ಸಮಾರಂಭದಲ್ಲಿ ಮಾಧವ ಪಾಟಾಳಿ ಅವರು ದೀಪ ಪ್ರಜ್ವಲನೆ ಮೂಲಕ ಶಿಬಿರ ಉದ್ಘಾಟಿಸಿದರು. ನಂತರ ಶಿಬಿರಾರ್ಥಿಗಳಿಗೆ ಬಣ್ಣಗಾರಿಕೆ ಕುರಿತು ಮಾರ್ಗದರ್ಶನ ನೀಡಿದರು. ನಿರಂತರ ನಾಲ್ಕು ದಿನಗಳ ಕಾಲ ಶಿಬಿರ ನಡೆಯಲಿದೆ. ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಸದಸ್ಯರುಗಳಾದ ಸುಮಿತ್ರಾ ಮಯ್ಯ, ರಾಜ ಮಯ್ಯ ಉಪಸ್ಥಿತರಿದ್ದರು.





