ಕಾಸರಗೋಡು: ಜಿಲ್ಲೆಯಲ್ಲಿ ಬಿರುಸಿನ ಮಳೆ ಮುಂದುವರಿದಿದ್ದು, ಕಾಸರಗೋಡು ಸೇರಿದಂತೆ ಆರು ಜಿಲ್ಲೆಗಳಲ್ಲಿ ಮೇ 25ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಸೂಚಿಸಲಾಗಿಉದೆ.
ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಸಂಜೆ 7ರಿಂದ ಬೆಳಿಗ್ಗೆ 7 ಗಂಟೆಯವರೆಗೆ ಮಲೆನಾಡು ಪ್ರದೇಶಗಳಲ್ಲಿ ಪ್ರಯಾಣ ಹೊರತುಪಡಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದರೆ. ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನತೆ ಜಾಗ್ರತೆ ಪಾಲಿಸುವಂತೆ ಸೂಚಿಸಲಾಗಿದೆ. ತುರ್ತು ಕಾರ್ಯಾಚರಣೆಗಾಗಿ ಎನ್‍ಡಿಆರ್‍ಎಫ್ ತುಕಡಿ ಮೇ 25ರಂದು ಕಾಸರಗೋಡು ತಲುಪಲಿರುವುದಗಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಮಾಹಿತಿ ನೀಡಿದ್ದಾರೆ.
ಬಿರುಸಿನ ಮಳೆಗೆ ಕಣ್ಣೂರಿನ ಕರಿವೆಳ್ಳೂರು ಚುರಲ್ ಓಯೋಲಂನ ಚೆಂಗಲ್ಪಾರದಲ್ಲಿ ಭೂಕುಸಿತ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಅಸ್ಸಾಂ ನಿವಾಸಿ ಗೋಪಾಲ್ ವರ್ಮನ್ (33)ಮೃತಪಟ್ಟವರು. ಇವರ ಜತೆಗಿದ್ದ ಟಿಪ್ಪರ್ ಚಾಲಕ ಜಿತಿನ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.





