ನವದೆಹಲಿ: ಟೀಮ್ ಇಂಡಿಯಾದ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಿದರೆ ಯಾವುದೇ ಗುರಿ ಸಾಧಿಸುವುದು ಅಸಾಧ್ಯವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ನೀತಿ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭಿವೃದ್ಧಿಯ ವೇಗ ಹೆಚ್ಚಿಸುವ ಅಗತ್ಯವಿದೆ ಎಂದರು.
'ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕಾಗಿದೆ. ಟೀಂ ಇಂಡಿಯಾ ರೀತಿ ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಿದರೆ ಇದು ಸಾಧ್ಯ' ಎಂದು ಹೇಳಿದರು.
'ವಿಕಸಿತ ಭಾರತ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಭಾರತೀಯನ ಗುರಿಯಾಗಿದೆ. ರಾಜ್ಯಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಇದು 140 ಕೋಟಿ ಭಾರತೀಯರ ಆಶಯವಾಗಿದೆ' ಎಂದು ಅಭಿಪ್ರಾಯಪಟ್ಟರು.
ನೀತಿ ಆಯೋಗದ ಆಡಳಿತ ಮಂಡಳಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಕೇಂದ್ರದ ಹಲವು ಸಚಿವರಿದ್ದಾರೆ. ಪ್ರಧಾನಿ ಮೋದಿ ಇದರ ಅಧ್ಯಕ್ಷರಾಗಿದ್ದಾರೆ.




