ನವದೆಹಲಿ: ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದಡಿ (ಬೇಹುಗಾರಿಕೆ) ಹರಿಯಾಣ ಮೂಲದ 25 ವರ್ಷದ ಯೂಟ್ಯೂಬರ್ ಜ್ಯೋತಿ ರಾಣಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಹರಿಯಾಣದ ಹಿಸಾರ್ ನಿವಾಸಿ ಹರಿಶ್ ಕುಮಾರ್ ಅವರ ಪುತ್ರಿ ಜ್ಯೋತಿ ರಾಣಿ ಅವರನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದಡಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜ್ಯೋತಿ ರಾಣಿ ಅವರು ದೆಹಲಿಯಲ್ಲಿ ಪಾಕ್ ಅಧಿಕಾರಿ ಅಹ್ಸಾನ್-ಉರ್-ರಹೀಮ್ ಅವರನ್ನು ಭೇಟಿಯಾಗಿದ್ದರು. ಜತೆಗೆ, ಎರಡು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವೇಳೆ ಭಾರತದ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಜ್ಯೋತಿ ರಾಣಿ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ




