ಟೆಲ್ ಅವೀವ್: ಇಸ್ರೇಲ್‌ನ ಟೆಲ್ ಅವೀವ್ ವಿಮಾನ ನಿಲ್ದಾಣದ ಮೇಲೆ ಭಾನುವಾರ ಕ್ಷಿಪಣಿ ದಾಳಿ ನಡೆದಿದೆ. ದಾಳಿಯಿಂದಾಗಿ ಆರು ಜನರಿಗೆ ಗಾಯಗಳಾಗಿವೆ. ಹುಥಿ ಬಂಡುಕೋರರು ಈ ದಾಳಿಯ ಹೊಣೆ ಹೊತ್ತಿದ್ದಾರೆ.
ಕ್ಷಿಪಣಿಯನ್ನು ಆಕಾಶದಲ್ಲಿಯೇ ಹೊಡೆದುರುಳಿಸಲು ಹಲವು ಪ್ರಯತ್ನಗಳನ್ನು ನಡೆಸಲಾಗಿತ್ತು ಎಂದು ಇಸ್ರೇಲ್ ಸೇನೆ ಹೇಳಿದೆ.
ವಿಮಾನ ನಿಲ್ದಾಣದ ಮೂಲಸೌಕರ್ಯಕ್ಕೆ ಹಾನಿ ಆಗಿಲ್ಲ. ವಿಮಾನ ನಿಲ್ದಾಣದ ವಾಹನ ನಿಲ್ದಾಣ ಪ್ರದೇಶದಲ್ಲಿ ಕ್ಷಿಪಣಿ ಅಪ್ಪಳಿಸಿದೆ.
ಟರ್ಮಿನಲ್ ಹಾಗೂ ರನ್‌ವೇ ಸನಿಹದಲ್ಲಿ ಕ್ಷಿಪಣಿ ದಾಳಿ ನಡೆದಿರುವುದು ಇದೇ ಮೊದಲು ಎಂದು ಇಸ್ರೇಲ್ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ.
ಹುಥಿಗಳನ್ನು ಗುರಿಯಾಗಿಸಿಕೊಂಡು ಬಹು ಹಂತಗಳ ಪ್ರತಿಕ್ರಿಯೆ ನೀಡಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಬೆಂಬಲಿತ ಬಂಡುಕೋರರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಹಿಂದೆಯೂ ಕಾರ್ಯಾಚರಣೆ ನಡೆಸಿದೆ, ಮುಂದೆಯೂ ನಡೆಸಲಿದೆ ಎಂದು ನೆತನ್ಯಾಹು ಹೇಳಿದ್ದಾರೆ.




