ಮೇದಿನಿನಗರ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಕಮಾಂಡರ್ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು (ಮಂಗಳವಾರ) ತಿಳಿಸಿದ್ದಾರೆ.
ಮಾವೋಮಾದಿಯ ಶವ ಹೊರತೆಗೆಯಲಾಗಿದ್ದು, ಉನ್ನತ ಕಮಾಂಡರ್ ತುಳಸಿ ಭುಯಿಯಾ ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಈ ಎನ್‌ಕೌಂಟರ್‌ನಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ತಲೆಗೆ ₹15 ಲಕ್ಷ ಇನಾಮು ಘೋಷಣೆಯಾಗಿದ್ದ ಮತ್ತೊಬ್ಬ ಮಾವೋವಾದಿ ನಿತೇಶ್ ಯಾದವ್ ಗಾಯಗೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ತಡರಾತ್ರಿ ಮೊಹಮ್ಮದ್‌ಗಂಜ್ ಮತ್ತು ಹೈದರ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೀಚುವಾನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.
ಕಾರ್ಯಾಚರಣೆ ನಡೆದ ಸ್ಥಳದಿಂದ ಲೋಡಿಂಗ್ ರೈಫಲ್ ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.




