ಕೊಚ್ಚಿ: ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರಾವಾಹಿ ನಟ ರೋಷನ್ ಉಲ್ಲಾಸ್ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರದ ಆರೋಪದ ಮೇಲೆ ಕಳಮಸ್ಸೆರಿ ಪೋಲೀಸರು ನಟನನ್ನು ಬಂಧಿಸಿದರು.
ತ್ರಿಶೂರ್ ಮೂಲದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. 2022 ರಲ್ಲಿ ತ್ರಿಶೂರ್‍ನ ತ್ರಿಕ್ಕಾಕರ ಮತ್ತು ಕೊಯಮತ್ತೂರಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ತನ್ನನ್ನು ಕೊಯಮತ್ತೂರಿಗೆ ಕರೆದೊಯ್ದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಆರೋಪಿಯನ್ನು ಪೋಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.





