ತಿರುವನಂತಪುರಂ: ರಾಜ್ಯದಲ್ಲಿ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ. ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆ ಇಂದು ಕೋಯಿಕ್ಕೋಡ್, ಕಣ್ಣೂರು, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಎಚ್ಚರಿಕೆ ಸೈರನ್‍ಗಳನ್ನು ಮೊಳಗಿಸಲು ಕೇಂದ್ರ ಹವಾಮಾನ ಇಲಾಖೆ ನಿರ್ಧರಿಸಿದೆ. ಸಂಜೆ 5 ಗಂಟೆಗೆ ಕವಚಂ ಎಚ್ಚರಿಕೆ ವ್ಯವಸ್ಥೆಯ ಭಾಗವಾಗಿ ಸೈರನ್ ಮೊಳಗಲಿದೆ.


