ಕಾಸರಗೋಡು: ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನಾಲ್ಕನೇ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಸಂಸ್ಕೃತಿ ಉತ್ಸವ ಮೇ 3ರಂದು ಬೆಳಗ್ಗೆ 9ರಿಂದ ಕಾಸರಗೋಡು ಸೀತಾಂಗೊಳಿಯ ಅಲಯನ್ಸ್ ಸಭಾಭವನದಲ್ಲಿ ಜರಗಲಿದೆ.
ಬೆಳಗ್ಗೆ 9ಕ್ಕೆ ನಡೆಯುವ ಭವ್ಯ ಶೋಭಾಯಾತ್ರೆಗೆ ಬೇಳ ಶೋಕಮಾತಾ ಇಗರ್ಜಿ ಧರ್ಮಗುರು ವಂದನೀಯ ಫಾದರ್ ಸ್ಟ್ಯಾನಿ ಪೆರೇರ ಚಾಲನೆ ನೀಡುವರು. ಪುತ್ತಿಗೆ ಗ್ರಾಪಂ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸುವರು. 10ಕ್ಕೆ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯುವುದು. 11ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಉದ್ಯಮಿ ಹಾಗೂ ಸ್ವಾಗತ ಸಮಿತಿ ಗೌರವಾಧ್ಯಕ್ಷ ಕೆ.ಕೆ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಅವರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅದ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಹಾಗೂ ಡಾ. ರೋಹಹನ್ ಮೊಂತೇರೋ ಮಂಗಳೂರು ಅವರಿಗೆ ಪೌರಸನ್ಮನ ನೀಡುವರು. ಕೃಷಿ ಸಚಿವ ಚೆಲುವರಾಯ ಸ್ವಾಮಿ ದತ್ತಿನಿಧಿ ಪ್ರಶಸ್ತಿ ಪ್ರದಾನ ನಡೆಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರು ಪತ್ರಕರ್ತರ ಪಿಂಚಣಿ ಯೋಜನೆಗೆ ಚಾಲನೆ ನೀಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಗಡಿನಾಡ ಸಾಧಕರನ್ನು ಸನ್ಮಾನಿಸುವರು. ಕರ್ನಾಟಕ ಮಾಧ್ಯಮ ಅಕಾಡಮಿ ಅದ್ಯಕ್ಷೆ ಆಯಿಷಾ ಖಾನಂ ಪತ್ರಕರ್ತರ ಗುರುತಿನ ಚೀಟಿ ವಿತರಿಸುವರು.
ಸಂಸದ ರಾಜ್‍ಮೋಹನ್ ಉಣ್ಣಿತ್ತನ್, ಶಾಸಕರಾದ ಸಿ.ಎಚ್ ಕುಞಂಬು, ಎನ್. ಎ. ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್, ಜಿಪಂ ಅದ್ಯಕ್ಷೆ ಬೇಬಿ ಬಾಲಕೃಷ್ಣನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭ ಒಟ್ಟು 21ಮಂದಿಗೆ ದತ್ತಿ ನಿಧಿ ಪ್ರಶಸ್ತಿ ವಿತರಿಸಲಾಗುವುದು. ಮಧ್ಯಾಹ್ನ 1ರಿಂದ ಸಮಸ್ಕ್ರತಿಕ ಕಾರ್ಯಕ್ರಮ ನಡೆಯುವುದು.






