HEALTH TIPS

ಮಧುಮೇಹ-ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಇಲ್ಲಿದೆ ಮದ್ದು: ಖಾಲಿ ಹೊಟ್ಟೆಯಲ್ಲಿ ಸೇವಿಸಿ!

 ಇತ್ತೀಚಿಗೆ ಯಾವ ಬಾಯಲ್ಲಿ ಕೇಳಿದ್ರು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಕುರಿಯಾಗಿ ಹೇಳುತ್ತಾರೆ. ತಮಗೂ ಈ ಸಮಸ್ಯೆ ಇರುವಂತೆ ಹೇಳಿಕೊಳ್ಳುತ್ತಾರೆ. ಅದರಲ್ಲೂ ಈಗ ಯುವ ಸಮುದಾಯದಲ್ಲು ಕೂಡ ಈ ಸಮಸ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಮಧುಮೇಹವು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಮಸ್ಯೆಯಾಗಿದ್ದು, ಅಂದಾಜು 77 ಮಿಲಿಯನ್ ಜನರು ಈ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿಗೆ ಯಾವ ಬಾಯಲ್ಲಿ ಕೇಳಿದ್ರು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಕುರಿಯಾಗಿ ಹೇಳುತ್ತಾರೆ. ತಮಗೂ ಈ ಸಮಸ್ಯೆ ಇರುವಂತೆ ಹೇಳಿಕೊಳ್ಳುತ್ತಾರೆ. ಅದರಲ್ಲೂ ಈಗ ಯುವ ಸಮುದಾಯದಲ್ಲು ಕೂಡ ಈ ಸಮಸ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಮಧುಮೇಹವು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಮಸ್ಯೆಯಾಗಿದ್ದು, ಅಂದಾಜು 77 ಮಿಲಿಯನ್ ಜನರು ಈ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜಾಗತಿಕ ತಾಣವಾಗಿದೆ. ಭಾರತದಲ್ಲಿ ಮಧುಮೇಹಿಗಳ ಹೆಚ್ಚಿನ ಭಾಗವು ರೋಗನಿರ್ಣಯ ಮಾಡದೆಯೇ ಉಳಿದಿದೆ, ಇದು ಈ ಕಾಯಿಲೆಗೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಹಾಗೆ ಪ್ರತಿಯೊಂದು ಮನೆಯಲ್ಲೂ ಈ ಸಮಸ್ಯೆ ಇರುವ ಒಬ್ಬರು ಸಿಗಬಹುದು. ಈ ಸಮಸ್ಯೆಗಳಗೆ ನಮ್ಮ ಆಹಾರ ಪದ್ದತಿ, ಜೀವನ ಶೈಲಿ ಪ್ರಮುಖ ಕಾರಣ ಎನಿಸಿದೆ. ಹಾಗೆ ಕೆಲವೊಂದು ಬಾಹ್ಯ ಅಂಶಗಳು ಸಹ ಈ ಸಮಸ್ಯೆ ಉಂಟಾಗಲು ಕಾರಣ ಎಂದು ತಿಳಿದುಬರಲಿದೆ. ಹಾಗೆ ಪ್ರಪಂಚದಾದ್ಯಂತ ಬರೋಬ್ಬರಿ 830 ಮಿಲಿಯನ್ ಮಂದಿ ಮಧುಮೇಹದಿಂದ ಬಳಲುತ್ತಿದ್ದರೆ, ಇತ್ತ 220 ಮಿಲಿಯನ್ ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಹಾಗೆ ಭಾರತದಲ್ಲಿ ಈ ಎರಡೂ ಕಾಯಿಲೆಗಳಿಂದ ಬಳಲುತ್ತಿರುವ ಜನರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ನಮ್ಮ ಆರೋಗ್ಯ ಕಾಪಾಡುವಾಗ ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ರಕ್ತದೊತ್ತಡ ಕಾಪಾಡಿಕೊಳ್ಳುವುದು ಅತ್ಯಗತ್ಯ. ನೀವು ಮಧುಮೇಹವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯವಾಗುವುದಿಲ್ಲ ಬದಲಾಗಿ ನೀವು ನಿಯಂತ್ರಣದಲ್ಲಿಡಬಹುದು.

ಹೀಗಾಗಿ ನೀವು ಖಾಲಿ ಹೊಟ್ಟೆಗೆ ಈ ಪಾನಿಯವನ್ನು ಸೇವಿಸುವುದರಿಂದ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಹಾಗಾದ್ರೆ ಖಾಲಿ ಹೊಟ್ಟೆಯಲ್ಲಿ ಯಾವ ಆಹಾರ ಸೇವಿಸಿದರೆ ಮಧುಮೇಹ, ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.



ನೆಲ್ಲಿಕಾಯಿ ರಸ

ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಅಥವಾ ನೆಲ್ಲಿಕಾಯಿ ರಸವನ್ನು ಸೇವಿಸುವುದು ನಿಮ್ಮ ಅಧಿಕ ರಕ್ತದೊತ್ತಡ ಅಥವಾ ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಲಿದೆ. ಇದು ಮಧುಮೇಹ ಮತ್ತು ರಕ್ತದೊತ್ತಡ ಎರಡನ್ನೂ ನಿಯಂತ್ರಿಸಲು ಅತ್ಯುತ್ತಮ ಆಯ್ಕೆಯಾಗಿದೆ. ವಿಟಮಿನ್ ಸಿ ಮತ್ತು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಮೆಣಸಿನ ಪುಡಿ ದಾಲ್ಚಿನ್ನಿ ನೀರು

ದಾಲ್ಚಿನ್ನಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಮೆಣಸಿನ ಪುಡಿ ಜೊತೆಗೆ ದಾಲ್ಚಿನ್ನಿ ಹಾಕಿ ಆ ನೀರು ಸೇವಿಸಬೇಕು. ಇದರಲ್ಲಿ ಪೈಪರಿನ್ ಅಂಶವಿದ್ದು ಇದು ದೇಹವು ಅಗತ್ಯ ಪೋಷಕಾಂಶಗಳ ಹೀರಿಕೊಳ್ಳಲು ಸಹಾಯ ಮಾಡಲಿದೆ. ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ದಾಲ್ಚಿನ್ನಿ ನೀರಿಗೆ ಒಂದು ಚಿಟಿಕೆ ಮೆಣಸಿನ ಪುಡಿ ಸೇರಿಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತು ರಕ್ತದೊತ್ತಡದ ಮಟ್ಟ ನಿಯಂತ್ರಿಸಬಹುದು.

ಮೆಂತ್ಯ ನೀರು

ಮೆಂತ್ಯವನ್ನು ಶತಮಾನದಿಂದಲೂ ಮಧುಮೇಹ ನಿಯಂತ್ರಿಸಲು ವ್ಯಾಪಕವಾಗಿ ಬಳಸಲಾಗುತ್ತಿದೆ. ಇದರಲ್ಲಿನ ಅತ್ಯಧಿಕ ಫೈಬರ್ ಅಂಶ ಹಾಗೆ ಹೀರಿಕೊಳ್ಳುವ ಅಂಶವು ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ರಾತ್ರಿ ಪೂರ್ತಿ ನೆನೆಸಿಟ್ಟ ಮೆಂತ್ಯ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಬೇಕಾಗುತ್ತದೆ.

ಅಗಸೆ ಬೀಜಗಳು

ಅಗಸೆ ಬೀಜವು ಆರೋಗ್ಯಕರ ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಉತ್ಕರ್ಷಣ ನಿರೋಧಕಗಳಿಂದ ತುಂಬಿದೆ. ಈ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬೆಂಬಲಿಸಲು ಮತ್ತು ರಕ್ತದೊತ್ತಡ ಕಡಿಮೆ ಮಾಡಲು ಸಹಾಯ ಮಾಡಬಹುದು.


Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries