ಸಮರಸ ಚಿತ್ರಸುದ್ದಿ: ಬದಿಯಡ್ಕ: ಶತ್ರುದೇಶ ಪಾಕಿಸ್ತಾನದ ವಿರುದ್ಧವಾಗಿ ಹೋರಾಡುತ್ತಿರುವ ಭಾರತ ದೇಶದ ವೀರ ಸೈನಿಕ ಬಂಧುಗಳಿಗೆ ಮತ್ತು ನೇತೃತ್ವವನ್ನು ವಹಿಸಿರುವಂತಹ ಪ್ರಧಾನ ಮಂತ್ರಿಗಳಿಗೆ ಶಕ್ತಿ ತುಂಬುವ ಸಲುವಾಗಿ ಎಡನೀರು ಮಠಾಧೀಶರಾದ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ನೇತೃತ್ವದಲ್ಲಿ ಶ್ರೀ ಎಡನೀರು ಮಠದ ಬೆಂಗಳೂರು ಶಾಖಾಮಠದಲ್ಲಿ ಶ್ರೀ ಕೃಷ್ಣ ದೇವರಿಗೆ ರಂಗ ಪೂಜೆಯನ್ನು ನೆರವೇರಿಸಲಾಯಿತು. ಶ್ರೀಗಳ ನೇತೃತ್ವದಲ್ಲಿ ಶ್ರೀದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ. ಟಿ ಶ್ಯಾಮ ಭಟ್ ಮತ್ತು ಶ್ರೀಮಠದ ಅಭಿಮಾನಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

.jpg)
