HEALTH TIPS

ಆಪರೇಷನ್ ಸಿಂಧೂರ ಮುಗಿದಿಲ್ಲ.. ಏನಾಯಿತು ಎಂಬುದು ಕೇವಲ ಟ್ರೇಲರ್: ರಾಜನಾಥ್ ಸಿಂಗ್

 ಭುಜ್: 'ಆಪರೇಷನ್ ಸಿಂಧೂರ' ಇನ್ನೂ ಮುಗಿದಿಲ್ಲ. ಏನಾಯಿತು ಎಂಬುದು ಕೇವಲ ಟ್ರೇಲರ್ ಅಷ್ಟೆ. ಸರಿಯಾದ ಸಮಯ ಬಂದಾಗ, ನಾವು ಸಂಪೂರ್ಣ ಚಿತ್ರಣವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭುಜ್  ವಾಯುನೆಲೆಗೆ ಭೇಟಿ:

ಗುಜರಾತ್‌ನ ಭುಜ್ ವಾಯುನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಶುಕ್ರವಾರ) ಭೇಟಿ ನೀಡಿದ್ದಾರೆ. ಕಳೆದ ವಾರ ನಡೆದ ಸಂಘರ್ಷದ ವೇಳೆ ಪಾಕಿಸ್ತಾನ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.

'ಆಪರೇಷನ್ ಸಿಂಧೂರ' ನಂತರ ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಅವರು, ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries