ಇಸ್ಲಾಮಾಬಾದ್: ಭಾರತ ಯಾವುದೇ ಸಮಯದಲ್ಲಿ ಮಿಲಿಟರಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಗೂಢಚಾರರು ಎಚ್ಚರಿಕೆ ನೀಡಿದ್ದಾರೆ.
ಮುಂದಿನ 24 ರಿಂದ 36 ಗಂಟೆಗಳು ನಿರ್ಣಾಯಕವಾಗಿವೆ ಎಂದು ಅವರು ಸರ್ಕಾರಕ್ಕೆ ತಿಳಿಸಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ಬಂದಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಭಾರತ ಪಾಕಿಸ್ತಾನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸುತ್ತಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದು, ಪಾಕಿಸ್ತಾನ ಸೇನೆ ಯಾವುದೇ ತುರ್ತು ಪರಿಸ್ಥಿತಿಗೆ ಸಜ್ಜಾಗಿರುವುದಾಗಿ ತರಾರ್ ಹೇಳಿದ್ದಾರೆ.




