ಕಾಸರಗೋಡು: ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ವಿವಿಧ ನದಿಗಳಿಗೆ ಪ್ರವಾಹ ಎಚ್ಚರಿಕೆ ನೀಡಿದೆ.
ಮೊಗ್ರಾಲ್, ನೀಲೇಶ್ವರ ಮತ್ತು ಉಪ್ಪಳ ನದಿಗಳಿಗೆ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಕಾರ್ಯಂಕೋಡ್ ನದಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ನದಿಗಳ ದಡದಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು ಎಂದು ಸೂಚಿಸಲಾಗಿದೆ..

