ನವದೆಹಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ.
ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಈ ಸಾಲಿನಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಭಾರದ್ವಾಜ್ ಹೇಳಿದರು.
12ನೇ ತರಗತಿ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 88.39. ಕಳೆದ ಸಾಲಿಗಿಂತ ಫಲಿತಾಂಶದಲ್ಲಿ ಈ ಬಾರಿ ಅಲ್ಪ ಹೆಚ್ಚಳವಾಗಿದೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 91.64ರಷ್ಟು, ಬಾಲಕರ ಉತ್ತೀರ್ಣ ಪ್ರಮಾಣ ಶೇ 85.70ರಷ್ಟು ಎಂದು ಅವರು ತಿಳಿಸಿದರು.
12ನೇ ತರಗತಿಯಲ್ಲಿ ಒಟ್ಟು 1.11 ಲಕ್ಷ ವಿದ್ಯಾರ್ಥಿಗಳು ಶೇ 90ಕ್ಕೂ ಹೆಚ್ಚು ಅಂಕಗಳಿಸಿದ್ದಾರೆ. 24,867 ವಿದ್ಯಾರ್ಥಿಗಳು ಶೇ 95ಕ್ಕೂ ಹೆಚ್ಚು ಅಂಕಗಳಿಸಿದ್ದಾರೆ.
ಈ ಬಾರಿ ಒಟ್ಟು 1.29 ವಿದ್ಯಾರ್ಥಿಗಳ ಪೈಕಿ 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಫಲಿತಾಂಶಕ್ಕೆ ವೆಬ್‌ಸೈಟ್ ನೋಡಿ: https://results.cbse.nic.in/




